September 16, 2026

ಇಲ್ಲಿನ ಮುಸ್ಲಿಮರು ಘಜನಿ, ಘೋರಿ, ಬಾಬರ್ಮಾನಸಿಕತೆಯಿಂದ ಹೊರ ಬರಬೇಕು

ಚಿಕ್ಕಮಗಳೂರು:ಘಜನಿ, ಘೋರಿ, ಬಾಬರ್ ಮಾನಸಿಕತೆ ಬಹಳ ಅಪಾಯಕಾರಿ. ಇಲ್ಲಿನ ಮುಸ್ಲಿಮರು ಅದರಿಂದ ಹೊರ ಬರಬೇಕು ಎಂದು ಬಿಜೆಪಿ ನಾಯಕ ಸಿಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಘಜನಿ, ಕಿಲ್ಜಿ, ಘೋರಿ, ಔರಂಗಜೇಬ್, ಮೊಘಲರು, ಟಿಪ್ಪು ಕಾಲದಲ್ಲಿ ೪೨ ಸಾವಿರ ದೇಗುಲ ಧ್ವಂಸ ಮಾಡಲಾಗಿತ್ತು. ಭಾರತೀಯ ಮುಸಲ್ಮಾನರು ಆ ದಾಳಿಕೋರರ ಜೊತೆ ತಮ್ಮ ಅಸ್ಮಿತೆಯನ್ನ ಗುರುತಿಸಿಕೊಳ್ಳುವುದಿಲ್ಲ. ಎಲ್ಲಾ ಮುಸ್ಲಿಮರನ್ನು ಒಂದೇ ತಕ್ಕಡಿಯಲ್ಲಿಟ್ಟು ನಾವು ನೋಡುವುದಿಲ್ಲ. ಇಲ್ಲಿನ ಮುಸ್ಲಿಮರಿಗೆ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಆದರ್ಶವಾಗಬೇಕು. ಆಗ […]

ಸಿಲಿಂಡರ್ ಸ್ಫೋಟ – 8 ಮಂದಿಗೆ ಗಂಭೀರ ಗಾಯ

ಬೆಂಗಳೂರು:ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಮುಂಜಾನೆ ಯಲಹಂಕದ ಎಲ್‌ಬಿಎಸ್‌ನಲ್ಲಿ ನಡೆದಿದೆ.ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಿಲಿಂಡರ್ ಸ್ಫೋಟದಿಂದಾಗಿ ಒಬ್ಬರಿಗೆ 60% ರಷ್ಟು ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಉಳಿದವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.ಗಾಯಾಳುಗಳನ್ನು ಕಂಡ ಕುಟುಂಬಸ್ಥರು ಆತಂಕಗೊAಡಿದ್ದಾರೆ. ಮನೆಯ ಅವಶೇಷಗಳನ್ನು ಕಂಡು ಗಾಬರಿಯಲ್ಲಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ […]

ಭೀಕರ ಅಪಘಾತ – ತಂದೆ, ಮಗು ಸಾವು

ನೆಲಮಂಗಲ:ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಕ್ರಾAತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ […]

ಕೆಎಸ್‌ಆರ್‌ಟಿಸಿಗೆ ಫುಡ್ ಡೆಲಿವರಿ ಬಾಯ್ ಬಲಿ

ಬೆಂಗಳೂರು:ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬಸವರಾಜು ಮೃತ ಫುಡ್ ಡೆಲಿವರಿ ಬಾಯ್. ತಡರಾತ್ರಿ 2 ಗಂಟೆ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿAದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ […]

ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಎಂಎಸ್ ಧೋನಿಗೆ ಆಹ್ವಾನ

ನವದೆಹಲಿ: ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಗೆ ಕೇವಲ 7 ದಿನಗಳು ಬಾಕಿ ಉಳಿದಿದ್ದು, ಇಂದಿನಿಂದ ಪೂಜಾಕಾರ್ಯಗಳು ಆರಂಭಗೊಂಡಿದೆ. ಈಗಾಗಲೇ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ. ಇದೀಗ ಚೆನ್ನೈ ಸೂಪರ್ ಕಿಂಗ್ಸ್  ತಂಡದ ನಾಯಕನಾಗಿರುವ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಲಾಗಿದೆ. ಸೋಮವಾರ ರಾಂಚಿಯಲ್ಲಿರುವ ಅವರ ನಿವಾಸದಲ್ಲಿ ಆಹ್ವಾನವನ್ನು ನೀಡಿದ್ದು, ಎಂಎಸ್ ಧೋನಿ ಭಕ್ತಿಪೂರ್ವಕವಾಗಿ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಧೋನಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಹ-ಪ್ರಾಂತೀಯ […]

ಕೊಚ್ಚೆಗೆ ನಾನು ಕಲ್ಲು ಹಾಕಲ್ಲ: ಪ್ರದೀಪ್ ಈಶ್ವರ್‌ಗೆ ತಿರುಗೇಟು

ಮೈಸೂರು:ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದು ಹೇಳುವ ಮೂಲಕ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡಿದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಕೌಂಟರ್ ಕೊಟ್ಟರು.ಮೈಸೂರಿನಲ್ಲಿ ಮಾತನಾಡಿದ ಅವರು, ಕೊಚ್ಚೆಗೆ ನಾನು ಯಾವತ್ತೂ ಕಲ್ಲು ಹಾಕಲ್ಲ ಎಂದರು. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ. ನಾನು ತಿಳಿಗೇಡಿಯಲ್ಲ, ನಾನು ಆ ಕೊಚ್ಚೆಗೆ ಕಲ್ಲು ಹಾಕಲ್ಲ ಎಂದು ಹೇಳುವ ಮೂಳಕ ಪ್ರದೀಶ್ ಈಶ್ವರ್ ಹೇಳಿಕೆಗಳಿಗೆ ಪ್ರತಾಪ್ ಸಿಂಹ […]

ಬಾಬರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮ ಆಗುತ್ತೆ

ಕಾರವಾರ:ಬಾಬರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೆದರಿಕೆ ಅಂತ ಬೇಕಾದ್ರೆ ತಿಳಿಯಿರಿ, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ ನಿರ್ನಾಮ ಮಾಡುವುದು ಗ್ಯಾರಂಟಿ ಎಂದು ಸಂಸದ ಅನಂತಕುಮಾರ್ ಹೆಗಡೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಸದರು, ಬಾಬರಿ ಮಸೀದಿಯಂತೆ ಭಟ್ಕಳದ ಮಸೀದಿಯನ್ನೂ ನಿರ್ನಾಮ ಮಾಡುವುದು ಗ್ಯಾರಂಟಿ. ಇದು ಅನಂತಕುಮಾರ ಹೆಗಡೆ ತೀರ್ಮಾನವಲ್ಲ, ಹಿಂದೂ ಸಮಾಜದ ತೀರ್ಮಾನ ಎಂದು ಹೇಳಿದ್ದಾರೆ.ಶಿರಸಿಯ ಸಿಪಿ ಬಜಾರ್‌ನಲ್ಲಿರುವ ಮಸೀದಿ, ಅದು ವಿಜಯ […]

ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮಬದುಕಿಗೆ ಸದುಪಯೋಗವಾಗಬೇಕು

ಬೆಂಗಳೂರು:ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ. ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ ಎಂದಿದ್ದಾರೆ.ನಿಮ್ಮದೇ ತೆರಿಗೆ […]

ನನ್ನ ಉಸಿರು ಇರೋವರೆಗೂ ಕಾವೇರಿಗಾಗಿ ಹೋರಾಟ ಮಾಡ್ತೀನಿ

ಬೆಂಗಳೂರು:ನನ್ನ ಉಸಿರು ಇರೋ ವರೆಗೂ ಕಾವೇರಿ ಪರವಾಗಿ ನಾನು ಹೋರಾಟ ಮಾಡ್ತೀನಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಿದೆ. ಕಾವೇರಿ ನೀರಾವರಿ ಬೋರ್ಡ್ನ ತೀರ್ಪು ರಾಜ್ಯಕ್ಕೆ ಮರಣ ಶಾಸನ. ನಿನ್ನೆ ಕೇಂದ್ರ ಜಲಶಕ್ತಿ ಸಚಿವಾಲಯದ ಜಲ ಸಂಪನ್ಮೂಲ ಸ್ಥಾಯಿ ಸಮಿತಿ ಸಭೆ ಇತ್ತು. ಆ ಸಭೆಯಲ್ಲಿ ಈ ಎಲ್ಲಾ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.ಕಾವೇರಿ ಜಲ ವಿವಾದ ಮಂಡಳಿ […]

ಕೈ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತಹೈಕಮಾAಡ್ ಮೇಲಿನ ಭಯವೇ ಜಾಸ್ತಿ

ಬೆಂಗಳೂರು:ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಮನ ಮೇಲಿನ ಭಕ್ತಿಗಿಂತ ಹೈಕಮಾಂಡ್ ಮೇಲಿನ ಭಯವೇ ಜಾಸ್ತಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಅವರು ರಾಮಮಂದಿರದ ಬಗ್ಗೆ ಒಳ್ಳೆಯ ಮಾತನಾಡದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಎಂದು ವ್ಯಂಗ್ಯವಾಡಿದ್ದಾರೆ. ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡಿದರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಕುರ್ಚಿಗೆ ಕುತ್ತು ಬರುವ ಭಯ. ಒಟ್ಟಿನಲ್ಲಿ ಎಡಬಿಡಂಗಿ ಕಾಂಗ್ರೆಸ್ ನಾಯಕರ ಪಾಡು […]