September 16, 2026

ಅಮಿತ್ ಶಾ ಭೇಟಿಯಾದ ವಿ ಸೋಮಣ್ಣ

ನವದೆಹಲಿ:ನಾಲ್ಕು ದಿನಗಳ ಕಾಲ ಕಾದು ಕೊನೆಗೂ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿದರು. ಉಭಯ ನಾಯಕರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗಾದ ಸೋಲು ಮತ್ತು ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪವಾಗಿದೆ.ಇದೇ ವೇಳೆ, ವಿಧಾನಸಭಾ ಚುನಾವಣೆಯ ಸೋಲಿನ ಬಗ್ಗೆ ಅಮಿತ್ ಶಾ ಅವರಿಗೆ ವಿವರಿಸಿದ ಸೋಮಣ್ಣ, ರಾಜ್ಯ ನಾಯಕರ ವಿರುದ್ಧ […]

ಅನಧಿಕೃತ ಬೆಟ್ಟಿಂಗ್ ಹಿನ್ನೆಲೆ ರೇಸ್ ಕೋರ್ಸ್ ಮೇಲೆ ಸಿಸಿಬಿ ದಾಳಿ

ಬೆಂಗಳೂರು:ಅಧಿಕೃತವಾಗಿ ಬೆಟ್ಟಿಂಗ್ ಜೊತೆಗೆ ಅನಧಿಕೃತವಾಗಿ ಕೂಡ ಬೆಟ್ಟಿಂಗ್ ನಡೆಯುತ್ತಿದ್ದಿದ್ದರಿಂದ ಸಿಸಿಬಿ ಪೊಲೀಸರು ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ದಾಳಿ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದ್ದಾರೆ. ಸಿಸಿಬಿ ತಂಡದ ವಿಶೇಷ ವಿಚಾರಣೆ ದಳವು ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.ಯಾವುದೇ ದಾಖಲೆಗಳು, ರಶೀದಿ ಇಟ್ಟುಕೊಳ್ಳದೇ ಹಣದ ವ್ಯವಹಾರ ನಡೆಸಲಾಗುತ್ತಿತ್ತು. ಈ ಹಿನ್ನಲೆ ದಾಳಿ ಮಾಡಿ ಬರೋಬ್ಬರಿ ಮೂರು ಕೋಟಿ 45 ಲಕ್ಷ ರೂಪಾಯಿ ನಗದು ವಶಪಡೆಸಿಕೊಳ್ಳಲಾಗಿದೆ. ಪ್ರಕರಣ ಸಂಬAಧ 66 ಜನರನ್ನು ಠಾಣೆಗೆ ಕರೆಸಿ […]

ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ

ಬೆಂಗಳೂರು:ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಹೇಳಿದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. […]

ಜನರ ಓಡಾಟಕ್ಕೆ ತೊಂದರೆ ಆಗದಂತೆ ವ್ಯಾಪಾರ ಮಾಡಿದರೆ ತೊಂದರೆ ಇಲ್ಲ

ಬೆಂಗಳೂರುಬಿಬಿಎAಪಿ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವ ಹಿನ್ನೆಲೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ನೂರಾರು ಸಂಖ್ಯೆಯಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ […]

ಯತೀಂದ್ರ ಎದುರಾಳಿಯಾದರೆ ಒಳ್ಳೆಯದು: ಪ್ರತಾಪ್ ಸಿಂಹ

ಮೈಸೂರು:ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಲೋಕಸಭೆ ಚುನಾವಣೆಯಲ್ಲಿ ಅವರು ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ಲ. […]

ಜನರು ಮಂತ್ರಾಕ್ಷತೆಗೆ ಓಟ್ ಹಾಕಬೇಕಾ?

ರಾಮನಗರ:ರಾಮಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೂ ರಾಜಕೀಯ ಉದ್ದೇಶದಿಂದ ಉದ್ಘಾಟನೆ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಅವರು (ಬಿಜೆಪಿ) ಮನೆಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಕೊಡುತ್ತಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಮಂತ್ರಾಕ್ಷತೆ ಕೊಟ್ಟವರಿಗಾ ಅಥವಾ ಎರಡು ಸಾವಿರ ರೂ. ಕೊಟ್ಟವರಿಗಾ? ಎಂಬುವುದನ್ನು ಜನ ನಿರ್ಧರಿಸುತ್ತಾರೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು.ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ಕಟ್ಟಲು ನಾವೂ […]

ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ

ಬೆಂಗಳೂರು:ಬ್ರ‍್ಯಾಂಡ್ ಬೆಂಗಳೂರು ಯೋಜನೆಯ ಮೂಲಕ ಬೆಂಗಳೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸುಸ್ಥಿರ ನಗರವಾಗಿ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಯುವ ನಾಯಕತ್ವ ಸಮ್ಮೇಳನ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಇನ್ಪೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ.ಬ್ರ‍್ಯಾಂಡ್ ಬೆಂಗಳೂರು ಅಂದ್ರೆ ಕನ್ನಡ. ಇಂಗ್ಲೀಷ್ ಮಾತನಾಡಬೇಕು ಅಂತಾ ಕನ್ನಡ ಬಿಡಬೇಡಿ. ಮಕ್ಕಳ ಮನಸ್ಸು ಯಾವುದೇ ಪೂರ್ವಪೀಡಿತವಾಗಿರಲ್ಲ. ನಾನು ಮಕ್ಕಳ ಪುಸ್ತಕ ಬರೆದಾಗ […]

ಹಾವೇರಿ ಗ್ಯಾಂಗ್ ರೇಪ್ ಪ್ರಕರಣತನಿಖೆ ಬಳಿಕ ಕಾನೂನು ಕ್ರಮ

ಬೆಂಗಳೂರು:ಹಾವೇರಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ವರದಿ ಬಂದ ಮೇಲೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯುವವರೆಗೂ ನಾವು ಏನನ್ನೂ ಊಹೆ ಮಾಡಲು ಆಗುವುದಿಲ್ಲ. ನಾವು ಸುಮ್ಮನೆ ಹೇಳಿಕೆ ಕೊಡುವುದರಿಂದ ಉಪಯೋಗವಿಲ್ಲ. ತನಿಖಾ ವರದಿ ಬರಲಿ, ವರದಿ ಬಂದ ಬಳಿಕ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೇ ಕ್ರಮ […]

ಕಲ್ಲಿದ್ದಲು ಅನೀಲಿಕರಣ ಯೋಜನೆಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡನೆ

ಬೆಂಗಳೂರು:ಕಲ್ಲಿದ್ದಲು ಅನಿಲೀಕರಣ ಯೋಜನೆಯನ್ನು ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮುಂದಿಡಲಾಗುವುದು. ನಂತರ ಔಪಚಾರಿಕವಾಗಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭೂಗತ ಕಲ್ಲಿದ್ದಲು ಅನೀಲಿಕರಣ ಯೋಜನೆಗೆ ಶೇ.೫೦ ರಷ್ಟು ರಿಯಾಯಿತಿ ನೀಡಲಾಗುವುದು. ವಾಣಿಜ್ಯ ಗಣಿಗಳಲ್ಲಿ ಭೂಗತ ಗಣಿಗಾರಿಕೆ ಮಾಡುವವರಿಗೆ ಕೇಂದ್ರ ಸರ್ಕಾರ ಆಯಾ ರಾಜ್ಯಗಳೊಂದಿಗೆ ಆದಾಯ ಹಂಚಿಕೆಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡುತ್ತದೆ ಎಂದಿದ್ದಾರೆ.ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆ ಮೂಲಕ ಭೂಗತ ಗಣಿಗಾರಿಕೆಗೆ ಪ್ರವೇಶಿಸುವವರಿಗೆ ಈ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. […]

ಬೆಳಗಾವಿಯಲ್ಲಿ ಬಿಜೆಪಿ ಸಂಘರ್ಷ ಜೋರು

ಬೆಳಗಾವಿ:ಲೋಕಸಭಾ ಚುನಾವಣೆ ಸಿದ್ಧತೆ ನಡೆಸುತ್ತಿರುವ ಬಿಜೆಪಿಗೆ ಬೆಳಗಾವಿ ಭಿನ್ನಮತ ಬಿಸಿ ತುಪ್ಪವಾಗಿದೆ. ಕ್ಷೇತ್ರವಾರು ನಡೆದ ಬಿಜೆಪಿ ಸಭೆಯಲ್ಲಿ ಮೂಲ ವರ್ಸಸ್ ವಲಸಿಗರ ಸಂಘರ್ಷ ಜೋರಾಗಿದೆ.ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮೂಲ ಬಿಜೆಪಿಗರು ಸಿಡಿದೆದ್ದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿಗೆ ಚುನಾವಣೆ ಹೊಣೆ ಹೊರೆಸಲಾಗಿತ್ತು. ಪರಿಣಾಮ ಜಿಲ್ಲೆಯ 13 ಕ್ಷೇತ್ರಗಳಲ್ಲಿದ್ದ ಬಿಜೆಪಿ ಶಾಸಕರ ಸಂಖ್ಯೆ ೭ಕ್ಕೆ ಇಳಿದಿದೆ. ಕಾಂಗ್ರೆಸ್ ೫ ಕ್ಷೇತ್ರಗಳಿಂದ 11 ಕ್ಷೇತ್ರಗಳಿಗೆ ಸಂಖ್ಯೆ ಹೆಚ್ಚಿಸಿಕೊಂಡಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಮಾತು ಕೇಳಬೇಡಿ. […]