ಸಂಸತ್ ದಾಳಿ: ಮೈಸೂರಿನ ಮನೋರಂಜನ್ ಸೇರಿಐವರಿಗೆ ಮಂಪರು ಪರೀಕ್ಷೆ
ನವದೆಹಲಿ:ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ ೬ ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ.ಮೈಸೂರಿನ ಡಿ. ಮನೋರಂಜನ್, ನಾಲ್ವರು ಆರೋಪಿಗಳಾದ ಸಾಗರ್ ಶರ್ಮಾ, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರಿಗೆ ಗುಜರಾತ್ ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮನೋರಂಜನ್ ಹಾಗೂ ಸಾಗರ್ ಅವರಿಗೆ ಹೆಚ್ಚುವರಿಯಾಗಿ ಟ್ರೈನ್ ಮ್ಯಾಪಿಂಗ್ ಪರೀಕ್ಷೆ ನಡೆಸಲಾಗಿದೆ.ಈ ಪ್ರಕರಣದ ಏಕೈಕ ಮಹಿಳಾ ಆರೋಪಿಯಾಗಿರುವ […]







































































































































































































































































































































































































































































































































































































































































































































































































































































































































































































































































































































