September 16, 2026

ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್ ತೆಕ್ಕೆಗೆಚುನಾವಣೆ ಬಹಿಷ್ಕರಿಸಿದ ಯತ್ನಾಳ್, ಬಿಜೆಪಿ ಸದಸ್ಯರು

ವಿಜಯಪುರ:ಮಹಾನಗರ ಪಾಲಿಕೆ ಮೇಯರ್ ಹುದ್ದೆ ಮತ್ತೆ ಕಾಂಗ್ರೆಸ್ ಪಾಲಾಗಿದೆ. ೨೧ನೇ ಅವಧಿಯ ಮೇಯರ್ ಆಗಿ ಕಾಂಗ್ರೆಸ್‌ನ ಮೆಹಜಬೀನ್ ಹೊರ್ತಿ ಆಯ್ಕೆಯಾಗಿದ್ದಾರೆ.ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಒಟ್ಟು 22 ಮತಗಳನ್ನು ಪಡೆದು ಮೇಯರ್ ಆಗಿ ಮಹೆಜಬೀನ್ ಹೊರ್ತಿ ಆಯ್ಕೆಯಾದರು.10 ಕಾಂಗ್ರೆಸ್ ಸದಸ್ಯರು, ಐವರು ಪಕ್ಷೇತರರು ,ಇಬ್ಬರು ಎಐಎಂಐಎA, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಠೋಡ್ ಮತಗಳ ಬೆಂಬಲದೊAದಿಗೆ ಗೆಲವು ಸಾಧಿಸಿದ್ದಾರೆ.ಬಿಜೆಪಿಯ 17 […]

ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸೂಚನೆ

ಬೆಂಗಳೂರು:ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವಂತೆ ಎಲ್ಲಾ ಟ್ರಾಫಿಕ್ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬAದಿದೆ.ಇAತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತು ಮಾಡಲು ನಿರ್ಧರಿಸಿದ್ದಾರೆ. 2974 ಡ್ರೈವಿಂಗ್ […]

ನ್ಯಾಯಾಲಯದಲ್ಲಿ ರಾಮ ಮಂದಿರ ವಿರುದ್ಧ ಕಪಿಲ್ ಸಿಬಲ್‌ರನ್ನು ಕಳುಹಿಸಿದ್ದು ಯಾರುಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಬೆಂಗಳೂರು:ರಾಮ ಮಂದಿರದ ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿಯಾದರೆ ರಾಮ ಮಂದಿರದ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ಕಪಿಲ್ ಸಿಬಲ್‌ರನ್ನು ಕಳುಹಿಸಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ.ನಾವು ರಾಮ ಭಕ್ತರೇ, ರಾಮ ಮಂದಿರದ ಬಾಗಿಲು ತೆಗೆಸಿದ್ದೇ ನಾವು ಎಂದು ಕಾಂಗ್ರೆಸ್ ಹೇಳಿದ್ದಕ್ಕೆ ಬಿಜೆಪಿ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದೆ.ಪೋಸ್ಟ್ನಲ್ಲಿ ಏನಿದೆ?ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು […]

2 ಲಕ್ಷ ಸಾಲಲ್ಲ, 2 ಎಕರೆ ಜಮೀನು, ಮೃತರ ಪುತ್ಥಳಿ ನಿರ್ಮಿಸಿ

ಚಿತ್ರದುರ್ಗ:ನಟ ಯಶ್ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ.ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ […]

ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗಳೂರಿನ ಸಿಇಓಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

ಚಿತ್ರದುರ್ಗ:ಸ್ವಂತ ಮಗುವನ್ನೇ ಹತ್ಯೆಗೈದು ಸೂಟ್‌ಕೇಸ್‌ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಟಾರ್ಟ್ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ವಿರುದ್ಧ ಗೋವಾದ ಹೋಟೆಲ್‌ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು. ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ […]

ಮೂರು ಡಿಸಿಎಂ ಸೃಷ್ಟಿ ವಿಚಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ:ದಲಿತ ಮತಗಳನ್ನು ಭದ್ರಪಡಿಸಿಕೊಳ್ಳಲು ಲೋಕಸಭಾ ಚುನಾವಣೆಗೂ ಮುನ್ನ ಇನ್ನೂ ಮೂರು ಡಿಸಿಎಂ ಸ್ಥಾನ ಸೃಷ್ಟಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಸಿದ್ದರಾಮಯ್ಯ ಆಪ್ತ ಬಣ ಒತ್ತಡ ಹೇರುತ್ತಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮೂವರು ಡಿಸಿಎಂ ವಿಚಾರ ಹೈಕಮಾಂಡ್ ಮುಂದೆ ಇಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದಿದ್ದಾರೆ.ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೆಚ್ಚುವರಿ ಡಿಸಿಎಂ ವಿಚಾರವಾಗಿ ನಮ್ಮ ಮುಂದೆ […]

ಅನಿವಾರ್ಯತೆ ಬಂದ್ರೆ ಲೋಕಸಭೆಗೆ ಸಚಿವರೂ ಸ್ಪರ್ಧೆ ಮಾಡ್ಬೇಕು

ಬೆಂಗಳೂರು:ಅನಿವಾರ್ಯತೆ ಬಂದರೆ ಸಚಿವರು ಸಹ ಸ್ಪರ್ಧೆ ಮಾಡಬೇಕಾಗುತ್ತದೆ ಅಂತ ಸುರ್ಜೇವಾಲ ತಿಳಿಸಿದ್ದಾರೆಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆಯ ಸಭೆಯಲ್ಲಿ ಆ ವಿಚಾರ ಚರ್ಚೆ ಆಗಿಲ್ಲ. ಆದರೆ ಸಚಿವರು ಸ್ಪರ್ಧೆ ಮಾಡೋ ಪರಿಸ್ಥಿತಿ ಬಂದರೆ ಸ್ಪರ್ಧಿಸಬೇಕಾಗುತ್ತದೆ ಅಂತ ಹೇಳಿದ್ದಾರೆ. ಕಳೆದ ಬಾರಿ ಕೃಷ್ಟಭೈರೇಗೌಡ ಸ್ಪರ್ಧೆ ಉದಾಹರಣೆ ಕೊಟ್ಟು ಹೇಳಿದ್ದಾರೆ ಅನ್ನೋ ಮೂಲಕ ಸಚಿವರ ಸ್ಪರ್ಧೆಗೆ ಸಂದೇಶ ಬಂದಿದೆ ಅನ್ನೋ ಮಾಹಿತಿ ನೀಡಿದ್ದಾರೆ.28 ಸಚಿವರನ್ನ ದೆಹಲಿಗೆ ಬರೋದಕ್ಕೆ […]

ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ಯುವಕನ ಅಸಭ್ಯ ವರ್ತನೆ

ಬೆಂಗಳೂರು:ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ಯುವಕನ ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ ೫ ರಂದು ರಾತ್ರಿ 8.40 ರ ಸುಮಾರಿಗೆ ಓರ್ವ ಯುವತಿ ಮಹದೇವಪುರದ ಪಾರ್ಕ್ನ ಸರ್ವಿಸ್ ರಸ್ತೆಯಲ್ಲಿ ಕಾರ್ ಪಾರ್ಕ್ ಮಾಡಿ ಕಾರಿನಲ್ಲೇ ಕುಳಿತುಕೊಂಡಿದ್ದಳು. ಈ ವೇಳೆ ಕಾರಿನ ಮುಂಭಾಗದಲ್ಲಿ ನಿಂತಿದ್ದ ಯುವಕ ಯುವತಿಯನ್ನು ನೋಡುತ್ತಲೇ ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ. ಆಗ ಯುವತಿ ಹೆದರಿಕೆಯಿಂದ ಕಾರ್ ಡೋರ್ ಲಾಕ್ ಮಾಡಿಕೊಂಡಿದ್ದಾಳೆ.ಬಳಿಕ ಯುವತಿ ಕಾರು ಸಮೇತ ಅಲ್ಲಿಂದ ತೆರಳಬೇಕು ಎಂದುಕೊAಡಳು. ಆದರೆ […]

ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದಡಿಕೆಶಿಗೆ ದೋಸ್ತಿಗಳು ತಿರುಗೇಟು

ಬೆಂಗಳೂರು:ರಾಮಮಂದಿರ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ಮುಂದುವರಿದಿದೆ. ಮಂತ್ರಾಕ್ಷತೆಯಲ್ಲಿ ಅನ್ನಭಾಗ್ಯದ ಅಕ್ಕಿ ಹುಡುಕಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ದೋಸ್ತಿ ಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು, ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ. ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು […]

ಲೋಕಾ ಚುನಾವಣೆಗೆ ಬಿಜೆಪಿ ತಯಾರಿ

ಬೆಂಗಳೂರು:ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಾಲೀಮು ನಡೆಸುತ್ತಿದ್ದು ಬೆಂಗಳೂರಿನ ರೆಸಾರ್ಟ್ನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆದಿದೆ.೮-೯ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ತುಮಕೂರು, ವಿಜಯಪುರ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಪರ್ಯಾಯ ಅಭ್ಯರ್ಥಿ ಹುಡುಕುವ ಬಗ್ಗೆ ಚರ್ಚೆ ಆಗಿದೆ.ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧೆಗೆ ಮಾಜಿ ಸಚಿವ ಸಿಪಿ ಯೋಗೇಶ್ವರ್ ನಿರಾಸಕ್ತಿ ತೋರಿದ್ದು ಬಿಜೆಪಿ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ […]