ಕೆಆರ್‌ಎಸ್ ಅಣೆಕಟ್ಟೆ ಸುತ್ತಮುತ್ತ ಗಣಿಗಾರಿಕೆ ನಿರ್ಬಂಧ
ಬೆಂಗಳೂರುಕೆಆರ್‌ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೆಆರ್‌ಎಸ್ ಅಣೆಕಟ್ಟೆಯ ೨೦ ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿದೆ. ಕೆಆರ್‌ಎಸ್ ಡ್ಯಾಂ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿಬಂದಿದೆ. ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟೆಯ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ. ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ […]







































































































































































































































































































































































































































































































































































































































































































































































































































































































































































































































































































































